ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ.
ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಭಾರೀ ಮಳೆಯ ನಡುವೆಯೂ ದೇಗುಲಕ್ಕೆ ಆಗಮಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಆದರೂ ಇಲ್ಲಿ ಮೂಲಭೂತ ಸೌಕರ್ಯ ಸರಿಯಾಗಿ ಮಾಡದೇ ಇರುವುದು ಭಾರೀ ಬೇಸರ ತಂದಿದೆ.
ಮಳೆಯ ನಡುವೆ ನೂರಾರು ಮಂದಿ ಕ್ಯೂನಲ್ಲಿ ನಿಂತರೂ ಟಿಕೆಟ್ ಕೊಡುವಲ್ಲಿ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲಿನಲ್ಲಿ ನಿಂತವರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಇಲ್ಲಿ ಮಹಿಳೆಯರಿಗೆ ಮಾತ್ರ ಶೌಚಾಲಯದ ವ್ಯವಸ್ಥೆಯಿದ್ದು, ಪುರುಷರಿಗೆ ಯಾವುದೇ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಂಜೆ 4 ಗಂಟೆವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಸಮಸ್ಯೆಗಳು ಕಂಡು ಬಂದರೆ ಅಲ್ಲಿಗೆ ತೆರಳಿರುವವರ ಕಥೆಯೇನು ಎಂಬುದೇ ಎಲ್ಲರ ಯಕ್ಷ ಪ್ರಶ್ನೆಯಾಗಿದೆ.
ಈ ಹಿನ್ನೆಲೆಯಲ್ಲಿ ಜನರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದ್ದಾರೆ.
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…