ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್ ಫಾಲ್ಸ್‌ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ.
ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕನ್ನಡಿಗರಿಗೆ ತಮಿಳುನಾಡು ಪೊಲೀಸರು ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಮಾರುಕೊಟ್ಟಾಯ್ ನಿವಾಸಿಗಳು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಕೈಬಿಡಲ್ಲ. ನಮಗೆ ನ್ಯಾಯ ಕೊಡಿಸಲೇಬೇಕು ಎಂದು ಕನ್ನಡಿಗರು ಅಂಗಲಾಚಿದ್ದಾರೆ.
ಇನ್ನು ಹೊಗೇನಕಲ್ ಫಾಲ್ಸ್‌ನಲ್ಲಿ ತೆಪ್ಪ ಸಂಚಾರ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ತೀವ್ರ ಇಳಿಮುಖವಾಗಿದೆ ಎನ್ನಲಾಗಿದ್ದು, ಫಾಲ್ಸ್‌ಗೆ ತೆರಳುವ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ.