ಚಾಮರಾಜನಗರ

ಹೊಗೇನಕಲ್‌ ಫಾಲ್ಸ್‌ | ತೆಪ್ಪ ಓಡಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ.

ಹೊಗೇನಕಲ್ ಫಾಲ್ಸ್‌ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್‌ಗೂ ಹೆಚ್ಚು ನೀರು ಬಿಟ್ಟಿದ್ದ ಪರಿಣಾಮ ಕಳೆದ ಒಂದು ವಾರದಿಂದ ಹೊಗೇನಕಲ್ ಫಾಲ್ಸ್‌ನಲ್ಲಿ ತೆಪ್ಪ ಓಡಿಸಲು ನಿರ್ಬಂಧ ವಿಧಿಸಲಾಗಿತ್ತು. 3 ದಿನಗಳಿಂದ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ತಮಿಳುನಾಡಿನ ಅಂಬಿಗರಿಗೆ ಅಲ್ಲಿನ ಅರಣ್ಯ ಇಲಾಖೆ ತೆಪ್ಪ ಓಡಿಸಲು ಅವಕಾಶ ನೀಡಿದೆ. ಆದರೆ ಕರ್ನಾಟಕದಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ನಮಗೆ ತೆಪ್ಪ ಓಡಿಸಲು ಬಿಡುತ್ತಿಲ್ಲ. ಕೇಳಿದರೆ ನಮಗೆ ಹಿರಿಯ ಅಧಿಕಾರಿಗಳಿಂದ ಯಾವುದೇ ಅನುಮತಿ ನೀಡಿಲ್ಲ ಎನ್ನುತ್ತಿದ್ದಾರೆ.

ಹೊಗೇನಕಲ್ ಫಾಲ್ಸ್‌ನಲ್ಲಿ 400 ಕ್ಕೂ ಹೆಚ್ಚು ಅಂಬಿಗರಿದ್ದು ತೆಪ್ಪ ಓಡಿಸುವುದನ್ನು ನಂಬಿಕೊಂಡಿದ್ದೇವೆ. ಆದರೆ ಅಧಿಕಾರಿಗಳ ನಿರ್ಲಕ್ಷದಿಂದ ನಮಗೆ ಜೀವನಕ್ಕೂ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತೆಪ್ಪ ಒಡಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

3 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago