Mysore
36
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಹೊಗೇನಕಲ್ ಸಮೀಪದ ಮಾರಿಕೊಟ್ಟಯಂನಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.

ಹನೂರು ತಾಲೂಕಿನ ಒಡೆಯರ ಪಾಳ್ಯ ಗ್ರಾಮ ಸಮೀಪದ ಗುಳ್ಳದ ಬಯಲು ಗ್ರಾಮದ ಶಿವು(22) ಮೃತಪಟ್ಟ ಯುವಕನಾಗಿದ್ದಾನೆ.

ಘಟನೆಯ ವಿವರ
ಒಡೆಯರಪಾಳ್ಯ, ಆಣೆ ಹೊಲ, ಕೋಣನಕೆರೆ ಗ್ರಾಮಗಳಿಂದ ತಮಿಳುನಾಡಿನ ಪೆನ್ನಾಗರಂಗೆ ಹುಣಸೆಹಣ್ಣು ಕೀಳಲು ತೆರಳಿದ್ದರು. ಕೂಲಿ ಕೆಲಸ ಮುಗಿದ ನಂತರ ನೀರಿನಲ್ಲಿ ಈಜಿಕೊಂಡು ಹೋಗಲು ನಿರ್ಧರಿಸಿದ್ದಾರೆ ಆದರೆ ಸ್ಥಳೀಯರು ನೀರಿನ ಪ್ರಮಾಣ ಹೆಚ್ಚಿರುವುದರಿಂದ ತೆಪ್ಪದ ಮೂಲಕ ಹೋಗಿ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರ ಮಾತು ಕೇಳದೆ ಈಜುಕೊಂಡೆ ದಡ ಸೇರಲು ಪ್ರಯತ್ನಿಸಿದ್ದಾರೆ. ಈ ವೇಳೆ ಐವರು ಸಹ ನೀರಿನ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶಿವು ಮಾತ್ರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರದಿಂದ ಶವವನ್ನು ನದಿ ದಡಕ್ಕೆ ಎಳೆದು ತರಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!