ಚಾಮರಾಜನಗರ

ಮೈದುಂಬಿ ಹರಿಯುತ್ತಿರುವ ಹೊಗೇನಕಲ್‌ ಜಲಪಾತ: ಜಲ ವೈಯ್ಯಾರ ನೋಡಲು ಪ್ರವಾಸಿಗರ ಲಗ್ಗೆ

ಹನೂರು: ಕಾವೇರಿ ಹೊರಹರಿವು ಹೆಚ್ಚುತ್ತಿದ್ದಂತೆ ಕರ್ನಾಟಕ- ತಮಿಳುನಾಡು ಜಲಗಡಿಯಾಗಿರುವ ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿದೆ.

ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಹೊರಹರಿವು ಹೆಚ್ಚಾಗಿದೆ. ಪರಿಣಾಮ ಹೊಗೇನಕಲ್ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಕಲ್ಲು ಬಂಡೆಗಳ ನಡುವೆ ಜಲ ವೈಯ್ಯಾರ ಸೃಷ್ಟಿಯಾಗಿದ್ದು, ನೀರಿನ ಪ್ರಮಾಣ ಏರುಗತಿಯಲ್ಲಿರುವುದರಿಂದ ತಮಿಳುನಾಡು ಮತ್ತು ಕರ್ನಾಟಕ ಎರಡೂ ಭಾಗದಲ್ಲೂ ಜಲಪಾತದ ಅದ್ಭುತ ದೃಶ್ಯಗಳು ನೋಡಲು ಸಿಗುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ, ತಮಿಳುನಾಡು ಎರಡೂ ಭಾಗದಲ್ಲಿ ಬೋಟಿಂಗ್‌ಗೆ ನಿರ್ಬಂಧ ಹೇರಿದ್ದು, ನೀರಿನ ರಭಸ ಕಡಿಮೆಯಾದರಷ್ಟೇ ನಿರ್ಬಂಧ ತೆರವಾಗಲಿದೆ‌.

ಜಲ ವೈಯ್ಯಾರ ನೋಡಲೆಂದೇ ಹೊಗೇನಕಲ್‌ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago