Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಳೆ ಬಂದರೆ ಕೆಸರು ಗದ್ದೆಯಂತಾಗುವ ಹೊಂಗನೂರು ಗ್ರಾಮದ ರಸ್ತೆಗಳು: ಗ್ರಾಮಸ್ಥರಿಗೆಲ್ಲಾ ಡೇಂಘಿ ಚಿಂತೆ!

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಜನರು ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಗ್ರಾಮದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ರಸ್ತೆ ಕೆಸರು ಗದ್ದೆಯಾಗಿ ಪರಿವರ್ತೆಯಾಗುತ್ತದೆ. ಗ್ರಾಮ ಪಂಚಾಯಿತಿಯ ಈ ನಡೆ ಬಗ್ಗೆ ಗ್ರಾಮದ ಜನರೆಲ್ಲರೂ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮದ ಬಸ್‌ ನಿಲ್ದಾಣವೇ ಮಳೆ ಬಂದರೆ ಕೆರೆಯಂತಾಗಿ ಜನರು ಬಸ್‌ಗಾಗಿ ಕಾಯಲು ಸೂಕ್ತ ಸ್ಥಳವೇ ಇಲ್ಲದಂತಾಗಿದೆ. ಈ ಹಿಂದೆ ಎರಡೂ ಬಸ್‌ ನಿಲ್ದಾಣಗಳು ನಿರ್ಮಾಣಗೊಂಡಿದ್ದು ಎರಡೂ ಸಂಪೂರ್ಣವಾಗಿ ಹಾಳಾಗಿದ್ದು, ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನು ಗ್ರಾಮದ ಪ್ರಮುಖ ರಸ್ತೆ ಅಭಿವೃದ್ಧಿಗೊಳಿಸಿ ದಶಕಗಳೇ ಕಳೆದಿದ್ದು, ಮಳೆಗಾಲದಲ್ಲಿ ರಸ್ತೆಯಲ್ಲವೂ ಕೆಸರು ಗದ್ದೆಯಾಗಿ ಬದಲಾಗುತ್ತಿದೆ. ಈ ಬಗ್ಗೆ ಗ್ರಾಮಸ್ಥರು ಗ್ರಾಪಂ ದೂರು ನೀಡಿದರೂ ಯಾವುದೇ ಪ್ರಯೋಜವಾಗಿಲ್ಲ.

ಪಿಡಿಒ ರಾಮೇಗೌಡ ವಾರದಲ್ಲಿ ಮೂರು ದಿನಗಳು ಸಹಾ ಗ್ರಾಪಂ ನಲ್ಲಿ ಕಾಣಸಿಗುವುದಿಲ್ಲ. ಜನರ ಸಮಸ್ಯೆಗಳಿಗೆ ಆಲಿಸುವ ಮನಸ್ಸು ಅವರಿಗಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆಗಳು ಹಾಳಾಗಿ ಅಲ್ಲಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಂತು ಡೇಂಘಿ, ಮಲೇರಿಯಾ ರೋಗಗಳು ಹರಡುವ ಸೂಚನೆಯನ್ನು ನೀಡುತ್ತಿದೆ. ಮಳೆ ನೀರನ್ನು ಸಮರ್ಪಕವಾಗಿ ಹೊರಹಾಕಲು ಸೂಕ್ತ ಚರಂಡಿ ವ್ಯವಸ್ಥೆಯೂ ಇಲ್ಲ. ಗ್ರಾಮದ ತುಂಬೆಲ್ಲಾ ಡೇಂಘಿ ಭಯ ಜನರನ್ನು ಕಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ರಸ್ತೆಗೆ ಶಾಸ್ವತ ಪರಿಹಾರ ಒದಗಿಸುವಂತೆ ಗ್ರಾಮಸ್ಥರು “ಆಂದೋಲನ” ಪತ್ರಿಕೆ ಜೊತೆ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

Tags: