ಚಾಮರಾಜನಗರ: ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಡೆ ತಾಲೂಕಿನ ಬೇಗೂರು ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಅರುಣ್(34) ಅಪಘಾತದಲ್ಲಿ ಮೃತಪಟ್ಟವರು. ಬೈಕ್ ಸವಾರು ಅರುಣ್ ಗುಂಡ್ಲುಪೇಟೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಲಾರಿ ತರಕಾರಿ ಲೋಡ್ ಹೊತ್ತು ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿತ್ತು. ಈ ವೇಳೆ ಬೇಗೂರು ಬಳಿ ಬೈಕ್ ಸವಾರ ಓವರ್ ಟೇಕ್ ಮಾಡುವ ಬರದಲ್ಲಿ ಬಂದಾಗ ಎದುರಾದ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಗುಂಡ್ಲುಪೇಟ್ ಪೊಲೀಸರು ಆಗಮಿಸಿ, ವಾಹನ ಜಪ್ತಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.