Mysore
21
mist

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕೊಳ್ಳೇಗಾಲ| ಲಾರಿ-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

accident (1)

ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.

ಉಡುಪಿ ಮೂಲದ ಲಾರಿ ಚಾಲಕ ಅನಂತ ಪದ್ಮನಾಭ(70) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಅಗರ, ನಿಂಗರಾಜು, ನಾಯಕ ಹಾಗೂ ಮಲ್ಲೇಶ್‌ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಕೊಳ್ಳೇಗಾಲ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!