ಚಾಮರಾಜನಗರ

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಬ್ಲೇಝರ್, ಟೈ ಮತ್ತು ಇತರ ಭಾರವಾದ ಸಮವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಶ್ರೀರೂಪ ಆದೇಶಿಸಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಅಸೌಕರ್ಯಕರವಾದ ಸಮವಸ್ತ್ರಗಳನ್ನು ಧರಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಹಗುರ, ಸಡಿಲ, ಆರಾಮದಾಯಕ ಉಡುಪುಗಳನ್ನು ಧರಿಸಲು ಶಿಕ್ಷಣ ಸಂಸ್ಥೆಗಳು ಅನುಮತಿ ನೀಡಬೇಕಿದೆ.

ಎಲ್ಲಾ ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಕೊಠಡಿಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಧ್ಯಾಹ್ನದ ತೀವ್ರ ಬಿಸಿ ವಾತಾವರಣದ ಸಮಯದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಬೇಕು. ಬಿಸಿ ಗಾಳಿಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಆದೇಶವು ಮುಂದಿನ ಸೂಚನೆ ಬರುವವರೆಗೆ ಅಥವಾ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿ ಕಡಿಮೆಯಾಗುವವವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago