ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ ಕೊಚ್ಚಿ ಹೋಗಿ ಕುಟುಂಬ ಬೀದಿಗೆ ಬಿದ್ದಿದೆ.
ಸಂತ್ರಸ್ತ ರಾಮಸ್ವಾಮಿ ಅವರಿಗೆ ಸೇರಿದ ಮನೆಯಲ್ಲಿ ಅವರ ತಾಯಿಯವರು ಮಲಗಿದ್ದ ವೇಳೆ ರಾತ್ರಿ 9 ಗಂಟೆ ಸುಮಾರಿಗೆ ಹಳ್ಳದ ನೀರು ಮನೆಗೆ ನುಗ್ಗಿ ಮನೆ ಕೊಚ್ಚಿ ಹೋಗಿದೆ. 50-60 ವರ್ಷದ ಹಿಂದೆ ಈ ರೀತಿ ನೀರು ಬಂದಿತ್ತು ಎಂದು ಹಿರಿಯರು ಹೇಳುತ್ತಾರೆ, ಆದರೆ ತಮಗೆ ಈ ರೀತಿ ಪ್ರವಾಹದ ಅನುಭವ ಇರಲಿಲ್ಲ ಎಂದು ರಾಮಸ್ವಾಮಿ ತಿಳಿಸಿದ್ದಾರೆ.
ನೀರು ನುಗ್ಗುತ್ತಿದ್ದಂತೆ ತಾಯಿಯವರನ್ನು ಮಾತ್ರ ಹೊರಗೆ ಕರೆತಂದು ಪ್ರಾಣ ಉಳಿಸಿಕೊಳ್ಳಲಾಗಿದೆ. ಮನೆಯಲ್ಲಿದ್ದ ಬಟ್ಟೆ-ಬರೆ, ಬೀರು, ಪಾತ್ರೆ-ಪಡಗ ಸೇರಿದಂತೆ ಗೃಹೋಪಯೋಗಿ ವಸ್ತುಗಳು, 40 ಗ್ರಾಂ ಚಿನ್ನಾಭರಣ ಮತ್ತು 70 ಸಾವಿರ ರೂ. ನಗದು ಹಣ ನೀರಿನಲ್ಲಿ ಕೊಚ್ಚಿ ಹೋಗಿದೆ. ಮನೆಗೆ ಸುಮಾರು 2 ಲಕ್ಷ ರೂ.ಗೂ ಅಧಿಕ ನಷ್ಟ ಸಂಭವಿಸಿದ್ದು, ಸದ್ಯ ಕುಟುಂಬಕ್ಕೆ ಉಳಿಯಲು ಸೂರು ಇಲ್ಲದಂತಾಗಿದೆ ಎಂದು ಸಂತ್ರಸ್ತರು ಕಣ್ಣೀರು ಹಾಕಿದ್ದಾರೆ.
ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…