Mysore
27
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಶಿವಸ್ವಾಮಿ(28) ಹಾಗೂ ಚಂದ್ರ (31) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಚಿನ್ನಾಭರಣಗಳು ಹಾಗೂ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

2026 ಫೆಬ್ರವರಿ 28ರಂದು ಬೆಳವಾಡಿ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಆರೋಪಿಗಳು ತಮ್ಮ ಕೈಚಳಕ ತೋರಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:
error: Content is protected !!