ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ.
ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ ದೃಶ್ಯ ಸವಿಯಲು ಹೋದ ಯುವಕರ ತಂಡಕ್ಕೆ ಜಲಾಶಯದಲ್ಲಿ ಸುಮಾರು 15 ಅಡಿ ಕ್ಷೇತ್ರದ ಹೆಬ್ಬಾವು ಕಂಡಿದೆ ತಕ್ಷಣ ಯುವಕ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟು ಗುಂಡಾಲ್ ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರು ನೀರಿಗೆ ತಿಳಿಯುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನು ಓದಿ: ಎಚ್.ಡಿ.ಕೋಟೆ| ಆಶ್ರಮ ಶಾಲೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ
ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಸುವ ಮೂಲಕ ತುಂಬಿರುವ ಜಲಾಶಯವನ್ನು ವೀಕ್ಷಿಸಲು ಸರ್ಕಾರಿ ರಜಾ ದಿನಗಳಲ್ಲಿ ಗುಂಡಾಲ್ ಜಲಾಶಯದ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ ಜಲಾಶಯದ ರುದ್ರರಮಣಿಯ ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡ, ತುಂಬಿರುವ ಜಲಾಶಯದ ನೀರು ನೋಡುಗರ ಕಣ್ಮನ ಸೆಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಗುಂಡಲ್ ಜಲಾಶಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರವಾಸಿಗರು ವಿಡಿಯೋ ಹರಿಬಿಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.





