ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 5:00 ಗಂಟೆಯವರೆಗೂ ನಡೆಯಿತು.
ಶ್ರಾವಣ ಮಾಸದ ಕುಂಬೋತ್ಸವ, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 1,64,22,932 ನಗದು 21 ಗ್ರಾಂ ಚಿನ್ನ ಹಾಗೂ 2.100 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಇ ಹುಂಡಿಯಿಂದ 2,89,713 ನೇಪಾಳದ 5 ನೋಟು ಸೇರಿದಂತೆ ಇತರೆ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತಾ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…