hundi counting
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ ೬ಗಂಟೆಯವರೆಗೂ ನಡೆಯಿತು.
ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ೨,೨೦,೨೨,೪೫೪ ರೂ. ನಗದು, ೫೫ ಗ್ರಾಂ ಚಿನ್ನ ಹಾಗೂ ೧,೬೨೭ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಇ-ಹುಂಡಿಯಿಂದ ೫೧,೦೬೨೬ ರೂ., ವಿದೇಶಿ ೩೦ ನೋಟುಗಳು, ಚಲಾವಣೆಯಲ್ಲಿ ಇಲ್ಲದ ೨,೦೦೦ ರೂ. ಮುಖಬೆಲೆಯ ೭ ನೋಟುಗಳು ಹುಂಡಿಯಲ್ಲಿ ಕಂಡುಬಂದಿವೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಲೆಕ್ಕಪತ್ರ ಸಲಹೆಗಾರ ಮಹದೇವ್, ಲೆಕ್ಕಾಧಿಕ್ಷಕರಾದ ಗುರುಮಲ್ಲಯ್ಯ, ಪ್ರಾಧಿಕಾರದ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಸಮಂತ್ ಕುಮಾರ್, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು, ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…