Mysore
15
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ನಾನು ಚಾ .ನಗರ ಲೋಕಸಭೆ ಟಿಕೆಟ್ ಆಕಾಂಕ್ಷಿ ಕೆ. ಶಿವರಾಂ

ತಿ.ನರಸೀಪುರ : ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು.ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, ಬಿಎಸ್ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ಪಕ್ಷದಲ್ಲಿ ಹಿರಿಯವನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ. ಅಲ್ಲದೆ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ ನನಗೆ ನೀಡಬೇಕು ಎಂದು ಆಗ್ರಹಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!