ಚಾಮರಾಜನಗರ

ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ : ಸಿಎಂ

ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಮಂಗಳವಾರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಅವರ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಅವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಅದನ್ನು ಘೋಷಣೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಿಸುತ್ತಿದ್ದವರಿಗೆ ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ ಎಂದರು.

ಎಲ್ಲರಿಗೂ ಪರಿಹಾರ ಕೊಡುತ್ತೇವೆ
ಸಿಎಂ ತಮ್ಮ ಕ್ಷೇತ್ರದಲ್ಲಿ ಸತ್ತವರಿಗೆ ಮಾತ್ರ ಪರಿಹಾರ ನೀಡುತ್ತಿರುವ ಬಗ್ಗೆ ಜೆಡಿಎಸ್ ಶಾಸಕ ಶರಣಗೌಡ ಚಂದಾಪುರ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಎಲ್ಲರಿಗೂ ನೀಡಲಾಗುತ್ತಿದೆ, ನಮ್ಮ ಗಮನಕ್ಕೆ ಬಂದರೆ ಪರಿಹಾರ ನೀಡುತ್ತೇವೆ. ಶಾಸಕರು ಕೇಳಿದರೂ ಖಂಡಿತ ಕೊಡುತ್ತೇವೆ ಎಂದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ
ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಸೇರಿಸಿ ಮಸೂದೆ ಮಂಡಿಸಿದ್ದಾರೆ . ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದರು.

ತೃತೀಯ ಭಾಷೆಗೆ ಅಂಕ : ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು
ತೃತೀಯ ಭಾಷೆಗೆ ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕೆಂದು ಉಚ್ಚ ನ್ಯಾಯಾಲಯ ಹೇಳಿದ್ದು, ಮುಂದಿನ ತೀರ್ಮಾನ ಮಾಡಲು ಸೂಚಿಸಿದ್ದು, ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago