ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಆಗದಿದ್ದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸತತ 6 ವರ್ಷಗಳ ಕಾಲ ಸಾಮಾನ್ಯ ಕಾರ್ಯಕರ್ತನಾಗಿ ಹನೂರು ವಿಧಾನಸಭಾ ಕ್ಷೇತ್ರದ ಮನೆ ಮಗನಾಗಿ ಪ್ರತಿಯೊಬ್ಬರ ಕಷ್ಟ ಸುಖದಲ್ಲಿ ಭಾಗಿಯಾಗಿ ನನ್ನ ಕೈಲಾದ ಮಟ್ಟಿಗೆ ಸೇವೆ ಸಲ್ಲಿಸಿದ್ದೇನೆ. ಮೊದಲ ಚುನಾವಣೆಯಲ್ಲಿಯೇ 45 ಸಾವಿರ ಮತಗಳನ್ನು ನೀಡುವ ಮೂಲಕ ನನಗೆ ಬೆಂಬಲ ಸೂಚಿಸಿ ಕ್ಷೇತ್ರದಲ್ಲಿ ಕೆಲಸ ಮಾಡಲು ಹೆಚ್ಚಿನ ಪ್ರೋತ್ಸಾಹ ನೀಡಿದ್ದೀರಿ. ಅದರಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡುವ ಮೂಲಕ ಶಾಸಕನಾಗಿ ಆಯ್ಕೆ ಮಾಡಿದ್ದೀರ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ನೀರಾವರಿ ಯೋಜನೆ, ತಾಲೂಕು ಕೇಂದ್ರದಲ್ಲಿ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ, ಪಿಜಿ ಪಾಳ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಒಡೆಯರಪಾಳ್ಯ ಗೋಪಿನಾಥಂ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ನಾಲ್ ರೋಡ್ ಗರಿಕೆ ಕಂಡಿ ರಸ್ತೆ, ಬಂಡಳ್ಳಿ ರಸ್ತೆ, ಹನೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮರು ಡಾಂಬರೀಕರಣ, ಲೋಕನಹಳ್ಳಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಇದಲ್ಲದೆ ಗುಂಡಲ್ ಜಲಾಶಯಗಳ ನಾಲ ಅಭಿವೃದ್ಧಿಗಾಗಿ ಐವತ್ತು ಕೋಟಿ ಅನುದಾನ ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ನಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ನನ್ನ ನಾಯಕತ್ವವನ್ನು ಹಾಗೂ ಅಭಿವೃದ್ಧಿಪರ ಕೆಲಸಗಳನ್ನು ಮೆಚ್ಚಿ, ಬಂಡಳ್ಳಿ ಗ್ರಾಮದ ವಿವಿಧ ಮುಖಂಡರುಗಳು ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು.
ವಿಶ್ವಕರ್ಮ ಸಮುದಾಯದ ಮುಖಂಡ ಶ್ರೀನಿವಾಸ ಮೂರ್ತಿ ಮಾತನಾಡಿ, ಶಾಸಕರು ಜನಪರ ಕೆಲಸ, ಕ್ಷೇತ್ರದ ಅಭಿವೃದ್ಧಿ ಉತ್ತಮ ಗುಣಯುಳ್ಳ ವ್ಯಕ್ತಿತ್ವ ಕಂಡು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇವೆ. ಶಾಸಕರು ವೈಯಕ್ತಿಕವಾಗಿ ನನಗೇನು ಮಾಡಬೇಕಾಗಿಲ್ಲ. ಗ್ರಾಮದ ಅಭಿವೃದ್ಧಿ ಮತ್ತು ಶೋಷಿತ ಸಮುದಾಯಗಳ ಪರವಾಗಿ ಹೆಚ್ಚಿನ ಕೆಲಸ ಮಾಡಲು ಬಯಸುತ್ತೇನೆ. ಗ್ರಾಮದಲ್ಲಿ ಕೆಲವೊಂದು ಬಡಾವಣೆಗಳಲ್ಲಿ ಸಿಸಿ ರಸ್ತೆ ಕುಡಿಯುವ ನೀರು ಹಾಗೆ ಸಮುದಾಯ ಭವನಗಳಿಗೆ ಒತ್ತು ನೀಡಬೇಕೆಂದು ಮನವಿ ಮಾಡಿದರು.
ವೀರಶೈವ ಸಮುದಾಯದ ಮುಖಂಡ ಶಂಕರಪ್ಪ ಮಾತನಾಡಿ, ಕ್ಷೇತ್ರದಲ್ಲಿ ಈ ಎರಡು ಕುಟುಂಬಗಳನ್ನು ದೂರ ಇಟ್ಟು ಮೂರನೇ ಶಕ್ತಿಯೊಂದು ಉದಯಿಸಬೇಕೆಂದು ಶ್ರಮಪಟ್ಟು 2008 ರಲ್ಲಿ ಹಾಲಿ ಕೇಂದ್ರ ಸಚಿವ ವಿ. ಸೋಮಣ್ಣ ರವರನ್ನು ಕ್ಷೇತ್ರಕ್ಕೆ ತರಬೇಕು ಅಂದುಕೊಂಡೆವು ಅದು ಆಗಲಿಲ್ಲ. ತದ ನಂತರ ಅವರ ಅಣ್ಣನ ಮಗನನ್ನು ಮೂರನೇ ಶಕ್ತಿಯಾಗಿ ಬೆಳೆಯಬೇಕು ಅಂದುಕೊಂಡೆವು ಅದ ಸಹ ಆಗಲಿಲ್ಲ. ಈಗ ಕ್ಷೇತ್ರದಲ್ಲಿ ಮಂಜುನಾಥ್ ಮೂರನೇ ಶಕ್ತಿಯಾಗಿ ಬಂದಿದ್ದು ಕ್ಷೇತ್ರವು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ಹಾಗಾಗಿ ಅವರಿಗೆ ಬೆಂಬಲವಾಗಿ ನಿಲ್ಲುತ್ತಿದ್ದೇವೆ ಎಂದರು.
ಬಂಡಳ್ಳಿ ವೆಂಕಟಚಲ(ತಿರುಪತಿ), ಗ್ರಾಪಂ ಮಾಜಿ ಸದಸ್ಯರಾದ ನಾಗಯ್ಯ, ಚಿಕ್ಕಲಿಂಗನಾಯಕ, ಸಿದ್ದಪ್ಪನಾಯ್ಕ, ಅಣ್ಣಯ್ಯ, ಮಹದೇವಪ್ಪ, ವೀರಭದ್ರಪ್ಪ, ನಾಗಣ್ಣ, ಸುದೀಪ್, ಚಂದ್ರೇಶ್, ಚಿಕ್ಕ ದಾಸಿ ನಾಯಕ, ದಾಸಯ್ಯ, ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್, ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ವೇಳೆ ಚಾಮುಲ್ ಮಾಜಿ ಅಧ್ಯಕ್ಷರಾದ ಗುರುಮಲ್ಲಪ್ಪ ಮುಖಂಡರುಗಳಾದ ಮಂಜೇಶ್ ಗೌಡ, ಜೇಸಿಮ್ ಪಾಷ, ಜವಾದ್,ಬಸರತ್,ರಕೀಫ್, ಶಾಂತಣ್ಣ, ಗಿರೀಶ್, ಪ್ರಮೋದ್, ಅತ್ತಿಖ್, ರಾಹೀಲ್, ನಾಗಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…