ಚಾಮರಾಜನಗರ

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅನ್ಯ ಕಾರ್ಯ ನಿಮಿತ್ತ ಹನೂರು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ ಆದರೂ ಅವರ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ ಅವರು ಮಾಡುವ ಎಲ್ಲಾ ಕಾರ್ಯಕ್ರಮಗಳಿಗೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಬಂಜಾರ ಸಮುದಾಯದ ತಾಂಡಗಳಿಗೆ ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯ ಇಲ್ಲದೆ ಇರುವುದು ಗಮನಕ್ಕೆ ಬಂದಿದ್ದು ಸಂಬಂಧ ಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಬಂಜಾರ ಸಮುದಾಯಕ್ಕೆ ವಿಶೇಷ ಅನುದಾನ ಕೊಡಿಸಲು ಬದ್ಧನಾಗಿದ್ದೇನೆ ಅದೇ ರೀತಿ ಬಂಜಾರ ಸಮುದಾಯದವರಿಗೆ ವೈಯಕ್ತಿಕವಾಗಿಯು ಸಹಾಯ ಮಾಡುವುದಾಗಿ ತಿಳಿಸಿದರು.

ಬಂಜಾರ ಸಮುದಾಯದವರು ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹನೂರು ತಾಲೂಕು ಕೇಂದ್ರದಲ್ಲಿ ಸಮುದಾಯ ಭವನ ಹಾಗೂ ಬಂಜಾರ ಸಮುದಾಯದವರಿಗೆ ಸ್ಮಶಾನ ಇಲ್ಲದೆ ಇರುವ ಬಗ್ಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

16 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

17 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

18 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago