ಚಾಮರಾಜನಗರ

ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಇದಕ್ಕೂ ಮುನ್ನ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದ, ಅವರು ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ನುಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ:-ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಸಭೆಯಲ್ಲಿ ಸಿಎಂ ಘೋಷಣೆಗಳು
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು
ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

27 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago