ಚಾಮರಾಜನಗರ

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳುವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್‌ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್‌ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

3 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

3 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

5 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

5 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago