ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು.
ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.
ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳುವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.
ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.
ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.
ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.
ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.
ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್‌ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರವರೆಗೂ ನನ್ನ ಜೊತೆಗೇ ಇದ್ದರು. ಜೆಡಿಎಸ್‌ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…