ಚಾಮರಾಜನಗರ: ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ(ಎನ್ ಮಹೇಶ್) ಮೇಲೆ ಭ್ರಷ್ಠಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಸೋಮವಾರ (ಏ.1) ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು ಸಲ್ಲಿಸಿದರು.
ಕೋಳ್ಳೆಗಾಲದ ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ, ಸಚಿವ ಕೆ ವೆಂಕಟೇಶ್, ಎಚ್ ಸಿ ಮಹದೇವಪ್ಪ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಸೂಕ್ತ ಕ್ರಮಕ್ಕೆ ಅವರು ದೂರಿನಲ್ಲಿ ಆಗ್ರಹಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಮಹೇಶ್, ಮಾರ್ಚ್ 28 ರಂದು ಕೋಳ್ಳೆಗಾಲದಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಂಜುಂಡಸ್ವಾಮಿ ಅವರು ನಮ್ಮ ಬಿಜೆಪಿ ಅಭ್ಯರ್ಥಿ ಬಾಲರಾಜ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಜೊತೆಗೆ ನನ್ನ ಬಗ್ಗೆಯೂ ಮತನಾಡಿದ್ದಾರೆ. ಇಲ್ಲೊಬ್ಬ ಸಮಾಜಘಾತುಕ ಎನ್.ಮಹೇಶ್ ಇದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಏನು ಮಾಡಿಲ್ಲ ಎನ್ನುತ್ತಿದ್ದಾರೆ. ಮಹೇಶ್ ಶಿಕ್ಷಣ ಸಚಿವರಾಗಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಕೊಡುವ ದುಡ್ಡಲ್ಲಿ ರೂ 30 ಕೋಟಿ ಲೂಟಿ ಹೊಡೆದಿದ್ದಾರೆ. ಈಗ ಬಾಲರಾಜ್ ಹಾಳು ಮಾಡಲು ಬಂದಿದ್ದೀರಿ ಎಂದು ಹೇಳಿದ್ದಾರೆ. ಇದು ಮಾಧ್ಯಮದಲ್ಲಿ ಸುದ್ದಿಯಾಗಿದೆ. ಇದು ನನ್ನ ಮಾನಹಾನಿ ಮಾಡುವಂತಹ ಮಾತು ಎಂದರು.
ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ನ್ಯಾಯಾಲಯದಲ್ಲೂ ಮೊಕದ್ದಮೆ ಹೂಡುವೆ. ಈ ಮೂವರು ಬಂದು ನಾನು ರೂ30 ಕೋಟಿ ಮೊತ್ತದ ಭ್ರಷ್ಟಾಚಾರ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಇಲ್ಲದಿದ್ದರೆ ಅವರು ಮೂರು ವರ್ಷ ಜೈಲಿಗೆ ಹೋಗಲಿ ಎಂದು ಮಹೇಶ್ ಹೇಳಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…