ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಈರೇಗೌಡನ ಹುಂಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನು (೨೮) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಹಲವು ಬಾರಿ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು. ಈತ ತನ್ನ ಮನೆಯ ಚಿಲ್ಲರೆ ಅಂಗಡಿಯಲ್ಲಿ ಸುಮಾರು ಎಂಟೂವರೆ ಲೀಟರ್ ಮದ್ಯವನ್ನು ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಪ್ರಕಾರ ಕವಲಂದೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಬಸವರಾಜ್ ನೇತೃತ್ವದಲ್ಲಿ ಶಿವಣ್ಣ ಮತ್ತು ಮೂರ್ತಿರವರ ಸಮಕ್ಷಮದಲ್ಲಿ ವಶಪಡಿಸಿಕೊಂಡು ಆರೋಪಿಯನ್ನು ಬಂಽಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾರ್ಯಾಚರಣೆಯಲ್ಲಿ ದೊಡ್ಡ ಕವಲಂದೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಬಸವರಾಜ್, ರಮೇಶ್ ಕುಮಾರ್, ನಾಗೇಂದ್ರ, ಚಾಲಕ ಮಹದೇವ ಶೆಟ್ಟಿ ಭಾಗವಹಿಸಿದ್ದರು.





