ಚಾಮರಾಜನಗರ

ಅಕ್ರಮ ಮದ್ಯ ಮಾರಾಟ; ವ್ಯಕ್ತಿ ಬಂಧನ

ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಈರೇಗೌಡನ ಹುಂಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನು (೨೮) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಹಲವು ಬಾರಿ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು. ಈತ ತನ್ನ ಮನೆಯ ಚಿಲ್ಲರೆ ಅಂಗಡಿಯಲ್ಲಿ ಸುಮಾರು ಎಂಟೂವರೆ ಲೀಟರ್ ಮದ್ಯವನ್ನು ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಪ್ರಕಾರ ಕವಲಂದೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಬಸವರಾಜ್ ನೇತೃತ್ವದಲ್ಲಿ ಶಿವಣ್ಣ ಮತ್ತು ಮೂರ್ತಿರವರ ಸಮಕ್ಷಮದಲ್ಲಿ ವಶಪಡಿಸಿಕೊಂಡು ಆರೋಪಿಯನ್ನು ಬಂಽಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ದೊಡ್ಡ ಕವಲಂದೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಬಸವರಾಜ್, ರಮೇಶ್ ಕುಮಾರ್, ನಾಗೇಂದ್ರ, ಚಾಲಕ ಮಹದೇವ ಶೆಟ್ಟಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

3 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

3 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

3 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

4 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

4 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

4 hours ago