ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿದ್ದ 90ಎಂ.ಎಲ್.ನ 14 ಕೇಸ್ ಮದ್ಯ ವನ್ನು ಮಹದೇಶ್ವರ ಬೆಟ್ಟ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮದ ಊರಬಸಪ್ಪವೊಡ್ಡಿನ ಗ್ರಾಮದ ನಿವಾಸಿಗಳಾದ ರಾಚಪ್ಪ ಆತನ ಸಹೋದರಿಯರಾದ ಲಕ್ಷ್ಮಿ ಮತ್ತು ಭದ್ರಮ್ಮ ಎಂಬುವರು ಆರೋಪಿಗಳಾಗಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.
ಘಟನೆ ವಿವರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ರಾಚಪ್ಪ ಎಂಬುವರ ಮನೆಯಲ್ಲಿ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ . ಆದರೆ ಮಾರಾಟಕ್ಕೆ ಶೇಖರಣೆ ಮಾಡಿದ್ದ 90ಮೀ 14 ಕೇಸ್ (೧೨೦ಲೀ) ಮದ್ಯವನ್ನು ವಶಕ್ಕೆ ಪಡೆದು ಮೂವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗೆ ಈಗಾಗಲೇ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಶ್ರೀ ಕ್ಷೇತ್ರವನ್ನು ಮದ್ಯಪಾನ ಮುಕ್ತ ಕ್ಷೇತ್ರವನ್ನಾಗಿ ಘೋಷಣೆ ಮಾಡಿದ್ದಾರೆ. ಆದರೂ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಈ ನಿಟ್ಟಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ಕೊಂಚಮಟ್ಟಿಗೆ ಇಳಿಕೆಯಾಗಿತ್ತು. ಇದೀಗ 14 ಕೇಸ್ ಮಧ್ಯದ ಪೌಚ್ ಗಳನ್ನು ಸಾಗಣೆ ಮಾಡುತ್ತಿರುವವರು ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ತಾಳು ಬೆಟ್ಟದಲ್ಲಿ ಪ್ಲಾಸ್ಟಿಕ್ ಚೆಕ್ಪೋಸ್ಟ್ ಇದ್ದರು ಇಷ್ಟು ಪ್ರಮಾಣದಲ್ಲಿ ಅಕ್ರಮವಾಗಿ ಮಧ್ಯ ಯಾವ ರೀತಿ ಸಾಗಾಣೆ ಯಾಗುತ್ತಿದೆ ಎಂಬುವುದು ಸಹ ಯಕ್ಷಪ್ರಶ್ನೆಯಾಗಿದೆ. ಇನ್ನು ಮುಂದಾದರು ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶ್ರೀ ಕ್ಷೇತ್ರದಲ್ಲಿ ಶಾಶ್ವತವಾಗಿ ಮದ್ಯ ಮಾರಾಟವನ್ನು ನಿಲ್ಲಿಸುವರು ಕಾದು ನೋಡಬೇಕಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…