Mysore
21
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ರಾಮಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನ ಗದ್ದೆ ಗ್ರಾಮದ ನಾಗರಾಜು ಆಲಿಯಾಸ್ ರಾಜ (45) ಬಂಧಿತ ಆರೋಪಿಯಾಗಿದ್ದಾನೆ.

ಇದನ್ನು ಓದಿ: ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

ಘಟನೆ ವಿವರ
ಹನೂರು ತಾಲೂಕಿನ ಪುದುನಗರ ಗ್ರಾಮದ ಉಡುತೊರೆ ಹಳ್ಳ ಪಕ್ಕದಲ್ಲಿ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ನೇತೃತ್ವದಲ್ಲಿ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ 20 ಗ್ರಾಂಜಾ ಗಿಡಗಳನ್ನು ಅಂದಾಜು ಮೌಲ್ಯ 5,25,000 ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ದಾಳಿಯಲ್ಲಿ ಮುಖ್ಯಪೇದೆ ಮಹೇಂದ್ರ, ಪೇದೆಗಳಾದ ರಘು,ರಾಜು, ಅಮಗೊಂಡ ಬಿರಾದರ್, ಲಿಯಾಕತ್ ಅಲಿಖಾನ್,ರಾಮಪ್ಪ ಹಕ್ಕಲ್ ಪಾಲ್ಗೊಂಡಿದ್ದರು.

Tags:
error: Content is protected !!