ganja
ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ವಿವರ
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸ್ತೂರು ಗ್ರಾಮದ ವೆಂಕಟರಾಜು ಮನೆಯಲ್ಲಿ ಅಕ್ರಮ ಒಣಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಮನೆಯಲ್ಲಿ 160 ಗ್ರಾಂ ಒಣ ಗಾಂಜಾ ಹಾಗೂ ನಾಡ ಬಂದೂಕು ಇರುವುದು ಪತ್ತೆಯಾಗಿದೆ ತಕ್ಷಣ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಪ್ರೊಫೆಷನರಿ ಎ.ಸಿ. ಎಫ್ ಸಂದೀಪ್ ಕುಮಾರ್, ಡಿ ಆರ್ ಎಫ್ ಶಿವನಗೌಡ, ಪೊಲೀಸ್ ಸಿಬ್ಬಂದಿಗಳಾದ ಸಿದ್ದರಾಮಯ್ಯ, ರಮೇಶ್, ನಂಜುಂಡಸ್ವಾಮಿ, ರವಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…