ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦) ಬಂಧಿತ ಆರೋಪಿ. ಈತನಿಂದ ಸುಮಾರು ೫.೩೧೦ ಲೀ. ಮದ್ಯ ಹಾಗೂ ಕೆಎ೧೦ಆರ್೦೭೪೫ ನಂಬರ್‌ವುಳ್ಳ ಟಿವಿಎಸ್ ಎಕ್ಸೆಲ್‌ಅನ್ನು ಜಪ್ತಿ ಮಾಡಲಾಗಿದೆ.
ಆರೋಪಿಯು ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಕೊಂಡೊಯ್ಯುತ್ತಿದ್ದನ್ನು. ಖಚಿತ ಮಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಮಾಲನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಅಬಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ. ಅಬಕಾರಿ ಉಪ ನಿರೀಕ್ಷಕ ಸಿದ್ದಯ್ಯ, ಹೆಡ್ ಕಾನ್ಸ್‌ಟೇಬಲ್ ಎಂ.ರಮೇಶ್, ಎನ್.ಜಯಪ್ರಕಾಶ್, ಸುಜನ್‌ರಾಜ್, ವಾಹನ ಚಾಲಕ ಮಂಜುಪ್ರಸಾದ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.