Illegal ration distribution: One person arrested.
ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ.
ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ ಬಂಧಿತ ಆರೋಪಿ ಇನ್ನೋರ್ವ ಆರೋಪಿ ಮಹಮ್ಮದ್ ಸುಹೇಬ್ ಪರಾರಿಯಾದ ಎನ್ನಲಾಗಿದೆ. ಆರೋಪಿಯಿಂದ ೨೩ ಚೀಲದಲ್ಲಿದ್ದ ೭೪೫ ಕೆ.ಜಿ ಅಕ್ಕಿ ಹಾಗೂ ಸಾಗಾಣಿಕೆ ಬಳಸಿದ್ದ ಗೂಡ್ಸ್ ವಾಹನವನ್ನು ಜಪ್ತಿ ಮಾಡಿದರು.
ಇವರುಗಳು ಕಾಮಗೆರೆ ಗ್ರಾಮದ ಅಕ್ಕಪಕ್ಕದ ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಕಾಮಗೆರೆಯ ಬೂದುಬಾಳು ರಸ್ತೆಯಲ್ಲಿ ಸಾಗಾಣಿಕೆ ಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಸುಪ್ರೀತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಓರ್ವ ಅರೋಪಿ ಪರಾರಿಯಾಗಿದ್ದು, ಇನ್ನೋರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ದಾಳಿಯಲ್ಲಿ ಆಹಾರ ಇಲಾಖೆಯ ಫುಡ್ ಇನ್ಸ್‌ಪೆಕ್ಟರ್ ಪ್ರಸಾದ್, ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಗಳು ರಾಜಪ್ಪ, ಗುರುಪ್ರಸಾದ್, ಕಾನ್ಸಟೇಬಲ್ ಪ್ರಭು ಇದ್ದರು.
ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…