ಚಾಮರಾಜನಗರ

ಅಕ್ರಮ ಪಡಿತರ ಸಾಗಾಟ : ಓರ್ವ ಬಂಧನ

ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ.

ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ ಬಂಧಿತ ಆರೋಪಿ ಇನ್ನೋರ್ವ ಆರೋಪಿ ಮಹಮ್ಮದ್ ಸುಹೇಬ್ ಪರಾರಿಯಾದ ಎನ್ನಲಾಗಿದೆ. ಆರೋಪಿಯಿಂದ ೨೩ ಚೀಲದಲ್ಲಿದ್ದ ೭೪೫ ಕೆ.ಜಿ ಅಕ್ಕಿ ಹಾಗೂ ಸಾಗಾಣಿಕೆ ಬಳಸಿದ್ದ ಗೂಡ್ಸ್ ವಾಹನವನ್ನು ಜಪ್ತಿ ಮಾಡಿದರು.

ಇವರುಗಳು ಕಾಮಗೆರೆ ಗ್ರಾಮದ ಅಕ್ಕಪಕ್ಕದ ಹಳ್ಳಿಗಳಲ್ಲಿ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಕಾಮಗೆರೆಯ ಬೂದುಬಾಳು ರಸ್ತೆಯಲ್ಲಿ ಸಾಗಾಣಿಕೆ ಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಸುಪ್ರೀತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಓರ್ವ ಅರೋಪಿ ಪರಾರಿಯಾಗಿದ್ದು, ಇನ್ನೋರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ದಾಳಿಯಲ್ಲಿ ಆಹಾರ ಇಲಾಖೆಯ ಫುಡ್ ಇನ್ಸ್‌ಪೆಕ್ಟರ್ ಪ್ರಸಾದ್, ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಗಳು ರಾಜಪ್ಪ, ಗುರುಪ್ರಸಾದ್, ಕಾನ್ಸಟೇಬಲ್ ಪ್ರಭು ಇದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

17 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

17 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

24 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

24 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

24 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

24 hours ago