Mysore
27
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ 6ನೇ ವಾರ್ಡ್‌ನ ಸಂತೇಮಾಳ ನಿವಾಸಿ ಜಮೀರ್ ಪಾಷಾ(49) ಬಂಧಿತ ಆರೋಪಿ. ಈತ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೇರಳ ಲಾಟರಿ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಟ್ಟಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬಳಿಯಿದ್ದ ಸುಮಾರು 1,68,000 ರೂ. ಮೌಲ್ಯದ 3360 ಲಾಟರಿ ಟಿಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಪ್ರಕರಣ ದಾಖಲಾಗಿದೆ. ಸಬ್ ಇನ್ಸ್ ಪೆಕ್ಟರ್ ಎಚ್.ವಿ.ಸ್ವಾಮಿ ಹಾಗೂ ನೇತೃತ್ವದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Tags:
error: Content is protected !!