ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಹನೂರು ತಹಶೀಲ್ದಾರ್ ಚೈತ್ರಾ ಅವರು ಆದೇಶ ಹೊರಡಿಸಿದ್ದಾರೆ.
ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾನೆ. ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮಿಯ 32ನೇ ಸಂಸ್ಮರಣೋತ್ಸವದಲ್ಲಿ ಭಾಗವಹಿಸಲು ಆರೋಪಿ ಇಮ್ಮಡಿ ಮಹದೇವಸ್ವಾಮಿ ಮುಂದಾಗಿದ್ದನು. ಆರೋಪಿ ಭಾಗಿಯಾದರೆ ಪ್ರತಿಭಟನೆ ಮಾಡುವುದಾಗಿ ಸಂತ್ರಸ್ತರು ಹಾಗೂ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿದ್ದರು.
ಇಮ್ಮಡಿ ಮಹದೇವಸ್ವಾಕಿ ಭಾಗಿಯಾದರೆ ಗಲಭೆ, ಶಾಂತಿಭಂಗ ಉಂಟಾಗುವ ಸಾಧ್ಯತೆಯಿದೆ. ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮುಂದಿನ ಆದೇಶದವರೆಗೂ ಮಹದೇಶ್ವರ ಬೆಟ್ಟಕ್ಕೆ ಆರೋಪಿಗೆ ಪ್ರವೇಶ ನಿಷೇಧಿಸಲಾಗಿದೆ.
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…