ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಬಿಗಿಗೊಳಿಸಿದ್ದಾರೆ.
ಕೇರಳ ಹೆದ್ದಾರಿಯ ಕನ್ನೇಗಾಲ ಟೋಲ್ ಬಳಿ ಗುಂಡ್ಲುಪೇಟೆ ಠಾಣೆ ವತಿಯಿಂದ ಹೆಚ್ಚುವರಿ ಚೆಕ್ ಪೋಸ್ಟ್ ತೆರೆದು ಪೊಲೀಸರನ್ನು ನೇಮಕ ಮಾಡಿ ಗುಂಡ್ಲುಪೇಟೆಗೆ ಆಗಮಿಸುವ ಮತ್ತು ತೆರಳುವ ಪ್ರತಿಯೊಂದು ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟು ತಪಾಸಣೆ ಮಾಡಲಾಗುತ್ತಿದೆ.
ದರೋಡೆಕೋರರು ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದು, ಕೆಲವು ಶ್ರೀಮಂತರರ ಮೇಲು ಕಣ್ಣಿಟ್ಟಿದ್ದು ಗುಂಡ್ಲುಪೇಟೆ ಮಾರ್ಗವಾಗಿ ಕೇರಳಕ್ಕೆ ತೆರಳುವ ಚಿನ್ನದ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದಷ್ಟೇ ಒಂದು ಕಾಲು ಕೆಜಿ ಚಿನ್ನ ಲೂಟಿ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಈಗಾಗಲೇ ಪೊಲೀಸರು 3 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಧ್ಯೆ ಪ್ರಕರಣದ ಕಿಂಗ್ ಪಿನ್ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.
ಮತ್ತೊಂದು ಚಿನ್ನದ ಉದ್ಯಮಿಯ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಕೇರಳದ ಚಿನ್ನದ ಉದ್ಯಮಿಗಳಾದ ಫೈಸಲ್ ಮತ್ತು ಜಮ್ಸಿದ್ ಇಬ್ಬರು ಕೇರಳದಿಂದ ಬಂದು ತಮ್ಮ ಚಿನ್ನವನ್ನು ಮಾರಾಟ ಮಾಡಿ 10 ಲಕ್ಷ ನಗದನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಗುಂಡ್ಲುಪೇಟೆ ಕೇರಳ ಗಡಿ ಮಧ್ಯೆ ಬರುವ ಕಾಡಿನಲ್ಲಿ ನೆಟ್ವರ್ಕ್ ಕಂಪ್ಲೀಟ್ ಬಂದ್ ಆಗುತ್ತದೆ. ಯಾವ ಮೊಬೈಲ್ ಸಿಮ್ ಕೂಡ ವರ್ಕ್ ಆಗಲ್ಲ. ಸಂಪರ್ಕ ಕಡಿತವಾಗುವ ಸ್ಥಳದಲ್ಲಿ ಚಿನ್ನದ ಉದ್ಯಮಿಗಳನ್ನು ಕಾರಿನಲ್ಲಿ ಬಂದು ಅಡ್ಡಗಟ್ಟಿದ ನಾಲ್ಕೈದು ಜನರ ತಂಡ ಮಾರಕಾಸ್ತ್ರ ತೋರಿಸಿ, ಬೆದರಿಸಿ 10 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿಯಾಗಿದೆ.
ಈ ಪ್ರಕರಣಗಳಿಂದ ಎಚ್ಚೆತ್ತ ಪೊಲೀಸರು ಈಗ ಟೋಲ್ ಗೇಟ್ ಬಳಿ ಮತ್ತೊಂದು ಚೆಕ್ಪೋಸ್ಟ್ ನಿರ್ಮಾಣ ಮಾಡಿದ್ದು, ಕೇರಳದಿಂದ ಕರ್ನಾಟಕ, ಕರ್ನಾಟಕದಿಂದ ಕೇರಳಕ್ಕೆ ತೆರಳುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…