ಚಾಮರಾಜನಗರ

ಪರಿಶಿಷ್ಟ ಜಾತಿ ನೌಕರರಿಗೆ ಬಡ್ತಿಯಲ್ಲಿ ಅನ್ಯಾಯ : ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪ

ಚಾಮರಾಜನಗರ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಪಿ ನೌಕರರಿಗೆ ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.

ರಾಜ್ಯದ ಅಧಿಕಾರ ಹಿಡಿಯಲು ದಲಿತ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ರಾಜ್ಯದ ೩೧ ಜಿಲ್ಲೆಗಳ ಪೈಕಿ ಕೇವಲ ಕೋಲಾರ ಜಿಲ್ಲೆಗೆ ಮಾತ್ರ ಎಸ್ಸಿಗೆ ಸೇರಿದ ಜಿಲ್ಲಾಧಿಕಾರಿಯನ್ನು ನೇಮಿಸಿದೆ. ಆ ಮೂಲಕ ಎಸ್ಸಿ, ಎಸ್ಟಿ ಜನಾಂಗದ ಐಎಎಸ್ ಅಧಿಕಾರಿಗಳಿಗೆ ಮಹತ್ವದ ಹುದ್ದೆಗಳನ್ನು ನೀಡದೆ ವಂಚಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯದ ಪದವಿ ಪೂರ್ವ ಶಿಕ್ಷಣ, ಗೃಹ, ಅರಣ್ಯ, ತೋಟಗಾರಿಕೆ, ಕೃಷಿ, ನಗರಾಭಿವೃದ್ಧಿ, ಸಾರಿಗೆ, ಡಿಪಿಎಆರ್, ಇಂಧನ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಮುಂಬಡ್ತಿಗೆ ಅರ್ಹರಾಗಿರುವ ಎಸ್ಸಿ, ಎಸ್ಪಿ ನೌಕರರಿಗೆ ಸಕಾಲದಲ್ಲಿ ಬಡ್ತಿ ನೀಡದೆ ವಂಚಿಸಲಾಗಿದೆ. ಕೃಷಿ ಇಲಾಖೆಯಲ್ಲಿ ೫೦ ಎಸ್ಸಿ, ಎಸ್‌ಟಿ ಅಧಿಕಾರಿಗಳಿಗೆ ಬಡ್ತಿ ನೀಡಿಲ್ಲ. ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗಳಿಗೆ ರೋಸ್ಟರ್ ಪದ್ಧತಿ ಅಳವಡಿಸಿಲ್ಲ ಎಂದು ದೂರಿದರು.

ಸಾಂವಿಧಾನಿಕ ಸಂಸ್ಥೆಯಾಗಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಸದನ ಸಮಿತಿಯ ಆದೇಶವನ್ನು ಕಡೆಗಣಿಸಿ ಎಸ್ಸಿ, ಎಸ್ಟಿ ಜನಾಂಗದ ೮೦ ಉಪನ್ಯಾಸಕರಿಗೆ ಅನ್ಯಾಯ ಮಾಡಲೆಂದೆ ಇತರರಿಗೆ ಬಡ್ತಿ ನೀಡಲಾಗಿದೆ. ಆ ಮೂಲಕ ಸಮಿತಿಗೆ ಯಾವುದೇ ಮಹತ್ವ ಇಲ್ಲ ಎಂದು ಸಾಬೀತುಪಡಿಸಿದೆ ಎಂದರು.

ಎಸ್ಸಿ, ಎಸ್ಪಿ ನೌಕರರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ ಕೂಡ ಎಸ್ಸಿ, ಎಸ್ಟಿ ಜನಾಂಗದ ಸಂಪುಟ ದರ್ಜೆ ಸಚಿವರು ಹಾಗೂ ಮೀಸಲು ಕ್ಷೇತ್ರಗಳಿಂದ ಗೆದ್ದಿರುವ ಶಾಸಕರು ಬಾಯಿ ಮುಚ್ಚಿಕೊಂಡು ಕುಳಿತಿರುವುದು ವಿಪರ್ಯಾಸ. ಇವರು ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದರು.

ಎರಡೂವರೆ ವರ್ಷಗಳಿಂದ ಎಸ್ಸಿ, ಎಸ್ಪಿ ಆಯೋಗಕ್ಕೆ ಅಧ್ಯಕ್ಷರನ್ನೇ ನೇಮಕ ಮಾಡದೆ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಈ ಅನ್ಯಾಯವನ್ನು ಸರಿಪಡಿಸದಿದ್ದರೆ ಈ ದಲಿತ ವಿರೋಧಿ ನೀತಿ ಖಂಡಿಸಿ ಮುಂದಿನ ದಿನಗಳಲ್ಲಿ ಬಿಎಸ್ಪಿ ಪಕ್ಷದ ವತಿಯಿಂದ ಹೋರಾಟ ಮಾಡಬೇಕಾಗುತ್ತದೆ. ಇದಲ್ಲದೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ, ರಾಜ್ಯ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಉಸ್ತುವಾರಿ ಪುಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖಂಡ ಎಸ್.ಪಿ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

16 mins ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

24 mins ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

5 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

5 hours ago