ಚಾಮರಾಜನಗರ

ಸುನಿಲ್‌ ಬೋಸ್‌ ವಿರುದ್ಧ ʼಗೋಬ್ಯಾಕ್ ಬೋಸ್ʼ ಭಿತ್ತಿಪತ್ರಗಳ ಅಳವಡಿಕೆ !

ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು.

ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ ‘ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್’ ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸುನೀಲ್ ಬೋಸ್, ‘ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ನಾನು ನಿರ್ದೋಷಿ ಎಂದು ಕೋರ್ಟ್ ಹೇಳಿದೆ. ಇದು ಬಿಜೆಪಿಯರ ಕೃತ್ಯ ಇರಬಹುದು. ಬಿಜೆಪಿಯವರಿಗೆ ಬೇರೆ ಯಾವುದೇ ಕೆಲಸಗಳಿಲ್ಲ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ’ ಎಂದರು.

ಒಂದು ವೇಳೆ ಆರೋಪ ಸಾಭೀತು ಮಾಡಿದರೆ ನಾನು ನಾಮ ಪತ್ರ ಸಲ್ಲಿಸುವುದಿಲ್ಲ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮದ್ದೂರು| ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್‌ ಭೇಟಿ

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ…

10 mins ago

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ…

31 mins ago

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ…

57 mins ago

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

2 hours ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

2 hours ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

3 hours ago