ಚಾಮರಾಜನಗರ

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಾಲಯದ ವಿಮಾನ ಗೋಪುರ, ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮವೂ ಫೆಬ್ರವರಿ 25ರಂದು ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗುವಂತೆ ವಾಂಗಾಳಿ ಅಮ್ಮನವರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಲ್ಲೂಕಿನ ಚಂಗವಾಡಿ ಗ್ರಾಮದಲ್ಲಿ ನೂತನವಾಗಿ ಲೋಕಾರ್ಪಣೆಗೊಳ್ಳುತ್ತಿರುವ ವಾಂಗಾಳಿ ಅಮ್ಮನವರ ದೇವಾಲಯದ ಪೂಜಾ ಪುನಸ್ಕಾರಗಳನ್ನು ಇದೇ ತಿಂಗಳ 25ರ ಬುಧವಾರದಂದು ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ.

25ರ ಬುಧವಾರ ಸಂಜೆ 3:30ಕ್ಕೆ ಸಕಲ ಮಂಗಳವಾದ್ಯಗಳೊಂದಿಗೆ ಗಂಗಾ ಪೂಜೆ ಮಾಡಿ ಗಂಗೆ ತರುವುದು. ನಂತರ ಗಣಪತಿ ಪೂಜೆ ಪುಣ್ಯಾಹ ವಾಚನ ಮೃತಿಕಾ ಸಂಗ್ರಹಣ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿದೆ. 26ರ ಗುರುವಾರದಂದು ಬೆಳಗ್ಗೆ 8:30ರಿಂದ ಬಿಂಬಕ್ಕೆ ಜಲದಿವಾಸ, ಕ್ಷೀರಾದಿವಾಸ ಅಗ್ನಿ ಪ್ರತಿಷ್ಠೆ ಮೂಲ ಮಂತ್ರ ಹೋಮ, ಅಂಗಹೋಮ, ಸ್ಪರ್ಶ ಹೋಮ, ದುರ್ಗ ಹೋಮ, ಗಣಪತಿ ಹೋಮ, ಕ್ರಿಯಾ ಹೋಮ, ಮಂಗಳಾರತಿ ನಂತರ ಅಷ್ಟ ಬಂಧನ ಪೂರ್ವಕ ದೇವಿಯ ಸ್ಥಿರ ಬಿಂಬ ಪ್ರತಿಷ್ಠ, ಗಣಪತಿ ಪ್ರತಿಷ್ಠ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಮಹಾಮಂಗಳಾರತಿ ನಡೆಯಲಿದೆ.

27ರ ಶುಕ್ರವಾರದಂದು ಬೆಳಗ್ಗೆ 7:30 ರಿಂದ ನಿತ್ಯ ಹೋಮ, ದೇವಿಯ ಪ್ರಾಣ ಪ್ರತಿಷ್ಠೆ, ನಾಡಿಸಂಧಾನ ತತ್ವನ್ಯಾಸ ಮಹಾನ್ಯಾಸ, ಪ್ರತಿಷ್ಠ ಹೋಮ, ಪಂಚಾಮೃತ ಅಭಿಷೇಕ, ಕಲಾ ಹೋಮ, ತತ್ವ ಹೋಮ ಹೀಗೆ 10ರಿಂದ 10.50 ರಲ್ಲಿ ಸಲ್ಲುವ ಶುಭ ಮೇಷ ಲಗ್ನದಲ್ಲಿ ದೇವಿಗೆ ಕುಂಭಾಭಿಷೇಕ, ವಿಶೇಷ ಅಲಂಕಾರ, ಅಷ್ಟಾವಧಾನ ಸೇವೆ, ನಿರೀಕ್ಷಣ ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಇದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ವಾಂಗಾಳಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ವಾಂಗಾಳಿ ಅಮ್ಮನವರ ದೇವಸ್ಥಾನದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

19 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

1 day ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

1 day ago