ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು, ಮೊನ್ನೆ ಘಟನೆಯಲ್ಲಿ 26 ಮಂದಿ ನಾಗರಿಕರು ಅಸುನೀಗಿದ್ದಾರೆ. ಪುಲ್ವಾಮ ದಾಳಿ ಬಳಿಕ ಕೇಂದ್ರ ಸರ್ಕಾರ ವಿರಮಿಸಬಾರದಿತ್ತು, ಮೂರನೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಮೊನ್ನೆ ನಡೆದ ಉಗ್ರದಾಳಿ ಅತ್ಯಂತ ಅಮಾನವೀಯ ಹೇಯ ಕೃತ್ಯ, ಮೃತ ಕುಟುಂಬಸ್ಥರ ಜೊತೆ ನಾವಿದ್ದು ಎಲ್ಲರಿಗೂ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ, ಬಹಳ ಎಚ್ಚರಿಕೆಯಿಂದ ಇರಬೇಕೆಂರು ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಉಗ್ರರು ಎಲ್ಲೇ ಇರಲಿ, ಯಾವ ಜಾತಿ- ಧರ್ಮದವರೇ ಆಗಿರಲಿ ಅವರನ್ನು ಮಟ್ಟ ಹಾಕಬೇಕು, ಕೇಂದ್ರ ಸರ್ಕಾರವು ಉಗ್ರ ಚಟುವಟಿಕೆ ಬೆಳೆಯಲು, ನಡೆಸಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು ಎಂದರು.
ಇದೇ ವೇಳೆ ಮೇಕೆದಾಟು ವಿಚಾರ ಸಂಬಂಧ ಮಾತನಾಡಿ , ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕಿರುವುದು ಕೇಂದ್ರ ಸರ್ಕಾರ. ಅವರು ಇಂದು ಅನುಮತಿ ಕೊಟ್ಟರೇ ನಾಳೆಯಿಂದಲೇ ಯೋಜನೆ ಅನುಷ್ಟಾನ ಮಾಡುತ್ತೇವೆ. ಕೇಂದ್ರ ಸರ್ಕಾರ ಘೋಚಣೆ ಮಾಡಿದ ಅನುದಾನವನ್ನೇ ಕೊಡುತ್ತಿಲ್ಲ, ರಾಜಕೀಯ ದ್ವೇಷದ ಕಾರಣ ಎನಿಸುತ್ತದೆ ಎಂದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…