ಚಾಮರಾಜನಗರ

ಇರಾನ್-ಇಸ್ರೇಲ್‌ ಸಂಘರ್ಷ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಸಹಾಯವಾಣಿ ಆರಂಭ

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ.

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಅನಿರ್ದಿಷ್ಟ ಅವಧಿಯವರೆಗೆ ಮುಚ್ಚಲಾಗಿದೆ.

ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮಗಳು :
ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಚಾಮರಾಜನಗರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ 24/7 ಕಾರ್ಯನಿರ್ವಹಿಸುವ ಚಾಮರಾಜನಗರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

08226-223160, 223161, 223163. ಮೊ.ನಂ.9740942901, 1077 ಟೋಲ್ ಫ್ರೀ ಸಂಖ್ಯೆ ಹಾಗೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

10 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

10 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

11 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

11 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

12 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

12 hours ago