ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ.
ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಅನಿರ್ದಿಷ್ಟ ಅವಧಿಯವರೆಗೆ ಮುಚ್ಚಲಾಗಿದೆ.
ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಜಿಲ್ಲಾಡಳಿತದ ಕ್ರಮಗಳು :
ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.
ಚಾಮರಾಜನಗರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ 24/7 ಕಾರ್ಯನಿರ್ವಹಿಸುವ ಚಾಮರಾಜನಗರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.
08226-223160, 223161, 223163. ಮೊ.ನಂ.9740942901, 1077 ಟೋಲ್ ಫ್ರೀ ಸಂಖ್ಯೆ ಹಾಗೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…