ಚಾಮರಾಜನಗರ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ : ಸಿ.ಎಂ

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ.

ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು. ಸಂಪುಟ ಪುನರ್ರಚನೆ: ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ , ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು.

ಇದನ್ನೂ ಓದಿ:-ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ : ಸಿ.ಎಂ

ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು. ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ 2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು. ಬೆಂಗಳೂರು ಬ್ಯಾಂಕ್ ದರೋಡೆ : ಅಪರಾಧಿಗಳ ಬಂಧನಕ್ಕೆ ಕ್ರಮ ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು. ಪ್ರಧಾನಿ ಮೋದಿ ಭೇಟಿ ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

3 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

3 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

3 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

4 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

4 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

4 hours ago