ಚಾಮರಾಜನಗರ

ಆಗಸ್ಟ್.10ರಂದು ಭರಚುಕ್ಕಿ ಫಾಲ್ಸ್‌ನಲ್ಲಿ ಕಲರ್‌ಫುಲ್‌ ಜಲಪಾತೋತ್ಸವ

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.

ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಇದಲ್ಲದೇ ಹೆಚ್.ಡಿ.ಕೋಟೆಯ ಕಬಿನಿ ಜಲಾಶಯದಿಂದಲೂ ನೀರನ್ನು ಬಿಟ್ಟಿದ್ದು, ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ,

ಈ ಹಿನ್ನೆಲೆಯಲ್ಲಿ ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ತನ್ನ ವ್ಯಾಪ್ತಿಯುದ್ದಕ್ಕೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ.

ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಭರಚುಕ್ಕಿ ಜಲಪಾತ ರಭಸವಾಗಿ ಧುಮ್ಮಿಕ್ಕುತ್ತಿದ್ದು, ನೋಡುಗರ ಮೈನವಿರೇಳಿಸಿದೆ. ಈ ಹಿನ್ನೆಲೆಯಲ್ಲಿ ಇದೇ ಆಗಸ್ಟ್.‌10ರಂದು ಚೆಲುವ ಚಾಮರಾಜನಗರ ಎಂಬ ಪರಿಕಲ್ಪನೆಯಡಿ ಜಿಲ್ಲೆಯ ಪ್ರವಾಸೋದ್ಯಮವನ್ನು ಪ್ರಗತಿಯತ್ತ ಕೊಂಡೊಯ್ಯಲು ಭರಚುಕ್ಕಿ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಸ್ವಚ್ಛಂದ ಪ್ರಕೃತಿ ನಡುವೆ ರಭಸವಾಗಿ ಧುಮ್ಮಿಕ್ಕುತ್ತಿರುವ ಭರಚುಕ್ಕಿ ಜಲಪಾತದಲ್ಲಿ ಜಲಪಾತೋತ್ಸವ ಆಯೋಜನೆಗೆ ಸಿದ್ಧತೆ ಕೈಗೊಂಡಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆಯಿದೆ.

ಈ ಜಲಪಾತೋತ್ಸವವನ್ನು ನಾಲ್ಕನೇ ಬಾರಿಗೆ ಆಯೋಜನೆ ಮಾಡಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇಟ್ಟಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

4 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

5 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

6 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

6 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

12 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

12 hours ago