ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ.
ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ ಸಂಗ್ರಹವಾಗಿದೆ. ಈ ಒಂದು ತಿಂಗಳಲ್ಲಿ ಬೆಟ್ಟಕ್ಕೆ ಅಪಾರ ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಈ ಅವಧಿಯಲ್ಲಿ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಕೆ ಕಾರ್ಯ ನಡೆಸಿದ್ದು, ನಗದು ರೂಪದಲ್ಲಿ ಮಾದಪ್ಪನಿಗೆ 2,58,44,097 ರೂ. ಕಾಣಿಕೆ ಬಂದು ಸೇರಿದೆ.
ಜತೆಗೆ 93 ಗ್ರಾಂ ಚಿನ್ನ, 3.350 ಕೆಜಿ ಬೆಳ್ಳಿ ಹಾಗೂ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಪತ್ತೆಯಾಗಿದೆ. ವಿಶೇಷವೆಂದರೆ ಈ ಕಾಣಿಕೆಯಲ್ಲಿ ಸೌದಿ ಅರೇಬಿಯಾ, ನೇಪಾಳ, ಕತಾರ್ ಹಾಗೂ ಜಪಾನ್ ನ ಕರೆನ್ಸಿಗಳು ಕಂಡುಬಂದಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…