Mysore
22
broken clouds

Social Media

ಶುಕ್ರವಾರ, 14 ನವೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜೆಡಿಎಸ್‌ ಶಾಸಕ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು, ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ. ಎಲ್ಲಾ ಭಾಗ್ಯಗಳು ಈ ಬರುತ್ತಿವೆ ಅಲ್ಲವೇ? ಹನೂರು ಜನಪ್ರಿಯ ಸಿಎಂ ನಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ. ಮಕ್ಕಳ ಭವಿಷ್ಯದ ಬಗ್ಗೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರಿ ಶಾಲೆಗಳ್ಲಲಿ ಪೌಷ್ಠಿಕ ಆಹಾರ ದೊರೆಯುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಹಾಡಿ ಹೊಗಳಿದರು.

ಇನ್ನು ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಎರಡು ಬಾರಿ ಸಿಎಂ ಆಗಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲೂ ಕೆಲ ಸಮಸ್ಯೆಗಳಿವೆ. ಸಮಸ್ಯೆ ಬಗೆಹರಿಸುವಂತೆ ಮನವಿ ಕೇಳಿಕೊಳ್ಳುತ್ತೇನೆ ಎಂದು ಮಂಜುನಾಥ್ ಮನವಿ ಮಾಡಿದರು.

 

Tags:
error: Content is protected !!