ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.
ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು, ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ. ಎಲ್ಲಾ ಭಾಗ್ಯಗಳು ಈ ಬರುತ್ತಿವೆ ಅಲ್ಲವೇ? ಹನೂರು ಜನಪ್ರಿಯ ಸಿಎಂ ನಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ. ಮಕ್ಕಳ ಭವಿಷ್ಯದ ಬಗ್ಗೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರಿ ಶಾಲೆಗಳ್ಲಲಿ ಪೌಷ್ಠಿಕ ಆಹಾರ ದೊರೆಯುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಹಾಡಿ ಹೊಗಳಿದರು.
ಇನ್ನು ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಎರಡು ಬಾರಿ ಸಿಎಂ ಆಗಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲೂ ಕೆಲ ಸಮಸ್ಯೆಗಳಿವೆ. ಸಮಸ್ಯೆ ಬಗೆಹರಿಸುವಂತೆ ಮನವಿ ಕೇಳಿಕೊಳ್ಳುತ್ತೇನೆ ಎಂದು ಮಂಜುನಾಥ್ ಮನವಿ ಮಾಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…