Mysore
33
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

ಹನೂರು| 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಅನುಮೋದನೆ: ಜೆಡಿಎಸ್ ಕಾರ್ಯಕರ್ತರ ಸಂಭ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳು, ಕೆರೆಗಳಿಗೆ ನೀರು ತುಂಬಿಸುವ 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಅನುಮೋದನೆ ನೀಡುತ್ತಿದ್ದಂತೆ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಂಗೇಗೌಡ ಮಾತನಾಡಿ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಬಂದ ಮಲೆ ಮಹದೇಶ್ವರರು ಪವಾಡ ಪುರುಷರಾಗಿ ನಮ್ಮ ಹನೂರು ಕ್ಷೇತ್ರದಲ್ಲಿಯೇ ನೆಲೆಸಿದ್ದಾರೆ. ಅದೇ ರೀತಿ ಬೆಂಗಳೂರಿನಿಂದ ಹನೂರು ವಿಧಾನಸಭಾ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸ್ಪಂದಿಸಲು ಮಂಜುನಾಥ್ ರವರು ಶಾಸಕರಾಗಿ ಬಂದಿದ್ದಾರೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮೊದಲ ಅವಧಿಯಲ್ಲಿ ನೀರಾವರಿಯ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ರಾಮನ ಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಹಲವರು ಚೆಕ್ ಡ್ಯಾಮ್ ಗಳಿಗೆ ನೀರು ಹರಿಸುವ ಮೂಲಕ ಆಧುನಿಕ ಭಗೀರಥರಾಗಿದ್ದಾರೆ. ತಾಲೂಕು ಕೇಂದ್ರವಾಗಿ ಹಲವಾರು ವರ್ಷಗಳು ಕಳೆದಿದ್ದರು ತಾಲೂಕು ಆಸ್ಪತ್ರೆ ಇಲ್ಲದ ಪರಿಣಾಮ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತೊಂದರೆಯಾಗಿತ್ತು. 20 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಭೂಮಿ ಪೂಜೆ ಸಲ್ಲಿಸಿದ್ದು ಕಾಮಗಾರಿ ಪ್ರಾರಂಭವಾಗಿದೆ ಈ ಕಾಮಗಾರಿ ಮುಗಿದ ನಂತರ ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಲಿದೆ. 200 ಕೋಟಿಗೂ ಹೆಚ್ಚು ಅನುದಾನ ತಂದು ಪ್ರಮುಖ ರಸ್ತೆಗಳ ಅಭಿವೃದ್ಧಿಪಡಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಮುಂದಿನ ಎರಡು ವರ್ಷಗಳ ಕಾಲಾವಕಾಶದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲಿದ್ದಾರೆ ಅವರಿಗೆ ಕ್ಷೇತ್ರದ ಜನರು ಹೆಚ್ಚಿನ ಸಹಕಾರ ನೀಡಬೇಕು ಎಂದರು.

ಮಡಿವಾಳ ಸಂಘದ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಮಾತನಾಡಿ, ಶಾಸಕರಾದ ಎಂ ಆರ್ ಮಂಜುನಾಥ್ ರವರು ಜ್ಞಾನೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವವನ್ನೇ ಮಾಡುತ್ತಿದ್ದಾರೆ. ಇದೀಗ ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನು ಹತ್ತು ಹಲವು ಯೋಜನೆಗಳನ್ನು ಪೂರ್ಣಗೊಳಿಸಲು ಕ್ಷೇತ್ರದ ಆರಾದ್ಯದೈವ ಮಹದೇಶ್ವರರು ಹೆಚ್ಚಿನ ಆರೋಗ್ಯ ಭಾಗ್ಯ ನೀಡಲಿ ಎಂದು ಶುಭ ಕೋರಿದರು.

ಇದೇ ಸಮಯದಲ್ಲಿ ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಆನಂದ್ ಕುಮಾರ್, ಮಡಿವಾಳ ಸಮುದಾಯದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಜೆಸಿಮ್ ಪಾಷ, ಚಿನ್ನವೆಂಕಟ್, ಎಸ್ ಆರ್ ಮಹದೇವ್, ಶಾಂತಣ್ಣ, ಶ್ರೀರಂಗ ,ಗುರುಸ್ವಾಮಿ, ನಟಣ್ಣ, ಸಾವಕಯ್ಯ, ಕುರಟ್ಟಿ ಹೊಸೂರು ನಾಗರಾಜು, ರಾಚಪ್ಪ, ಪ್ರಮೊದ್, ಸತ್ಯರಾಜ್, ದಿನೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!