ಹನೂರು : ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಶ್ರೀ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಚಿಕಿತ್ಸೆ ಪಡೆದುಕೊಂಡ ಸಂತ್ರಸ್ಥರು, ಬಾಧಿತ ಕುಟುಂಬಗಳವರು ತಮ್ಮ ಭವಿಷ್ಯದ ಭದ್ರತೆಗೆ ಸರ್ಕಾರಿ ನೌಕರಿಯನ್ನು ನೀಡಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿ ಸಂತ್ರಸ್ಥ ಕುಟುಂಬಕ್ಕೆ ಒಂದು ಸರ್ಕಾರಿ ನೌಕರಿ ನೀಡುವ ಮೂಲಕ, ಬದುಕನ್ನು ಮತ್ತೆ ಸ್ಥಿರಗೊಳಿಸಲು ಅವಕಾಶ ನೀಡಬೇಕೆಂದು ಅವರು ಆಗ್ರಹಿಸಿದರು.
ಈ ಸಂಬಂಧ ಶಾಸಕರು ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹಾಗೂ ಸಮಾಜ ಕಲ್ಯಾಣ ಸಚಿವರ ಮಟ್ಟದಲ್ಲಿ ಶಿಫಾರಸು ಮಾಡಿ, ಸಂತ್ರಸ್ತರಿಗೆ ಒಳ್ಳೆಯ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.





