ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಇಂದು(ಏಪ್ರಿಲ್.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೆಲವುಗಳ ಮೇಲೆ ಬೆಲೆ ಏರಿಕೆಗೂ ಹಾಗೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ವಸ್ತುಗಳಿಗಾಗಲಿ 25 ವರ್ಷದ ಹಿಂದೆ ಇದ್ದ ಬೆಲೆಯನ್ನೇ ಈಗಲು ಮುಂದುವರಿಸಲು ಆಗುತ್ತಾ? ಎಂದು ಪ್ರಶ್ನಿಸಿದರು.
ಇನ್ನು ಹಾಲಿನ ದರ 4 ರೂ. ಏರಿಕೆಯಾದ ಹಣವನ್ನು ಸಂಪೂರ್ಣ ರೈತರಿಗೆ ನೀಡುತ್ತೇವೆ. ಅಲ್ಲದೇ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡಲು ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…