Kalanahundi | Protest demanding better bus facilities
ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು.
ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ ಕಾಳನಹುಂಡಿ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ದಿನಾಲೂ ಜನರಿಂದ ತುಂಬಿ ಹೋಗುತ್ತಿದ್ದು ಜನರು ಬಸ್ ಹತ್ತಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಾಳನಹುಂಡಿ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಬಸ್ ಪ್ರಯಾಣದಿಂದಲೇ ದೂರ ಉಳಿದು ತೊಂದರೆ ಪಡುವಂತಾಗಿದೆ. ಈ ವಾಸ್ತವ ಸ್ಥಿತಿಯ ಅರಿವು ಇದ್ದರೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೆಚ್ಚುವರಿ ಬಸ್ ಓಡಿಸಲು ಯಾವುದೇ ಕ್ರಮ ವಹಿಸದಿರುವುದರಿಂದ ಬೇಸತ್ತು ಪ್ರತಿಭಟನೆಗೆ ಇಳಿದಿರುವುದಾಗಿ ತಿಳಿಸಿದರು.
ಕಾಳನಹುಂಡಿ ಹಾಗೂ ಕಲ್ಪುರ ಗ್ರಾಮಗಳಿಗೆ ಪ್ರತ್ಯೇಕವಾಗಿ ಸಾರಿಗೆ ಬಸ್‌ಗಳನ್ನು ಓಡಿಸಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಡಿಪೋ ಮ್ಯಾನೇಜರ್ ಕುಮಾರನಾಯಕ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಕೈಬಿಟ್ಟರು.
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…