ಚಾಮರಾಜನಗರ

ಹನೂರಿನಲ್ಲಿ ಈ ಬಾರಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು: ಶಾಸಕ ಎಂಆರ್‌ ಮಂಜುನಾಥ್‌

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ರಾಜ್ಯ ಈಗಿನ ಕರ್ನಾಟಕ ೧೯೫೬ ನವೆಂಬರ್ ಒಂದರಂದು ನಿರ್ಮಾಣವಾದುದರ ಸಂಕೇತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಿದ್ದಾರೆ.

ಹನೂರು ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಭಾಷೆಯ ಜನರು ಶಾಂತಿ ಸಹ ಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಭಾಷೆಯ ಜನರನ್ನು ಒಗ್ಗೂಡಿಸಿಕೊಂಡು, ರಾಜ್ಯದ ಗಡಿ ತಾಲೂಕಾದ ಹನೂರಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಮುಖಂಡರುಗಳು ಪಕ್ಷತೀತವಾಗಿ ಸಹಕರಿಸಬೇಕು, ನಮ್ಮ ಕಾರ್ಯಕ್ರಮ ಇತಿಹಾಸ ಪುಟದಲ್ಲಿ ಸೇರುವಂತೆ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಧ್ವಜ ಹಾಗೂ ನಾಡಧ್ವಜ ಹಾರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಬರುವಂತಹ ಅತಿಥಿಗಳು ಹಾಗೂ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಉಪಹಾರ, ಕನ್ನಡ ಧ್ವಜ ಶಾಲು, ಶಲ್ಯ ಸೇರಿದಂತೆ ಕಾರ್ಯಕ್ರಮದ ಜವಾಬ್ದಾರಿಯನ್ನು ಇಲಾಖೆವಾರು ಹಂಚಿಕೆ ಮಾಡುವ ಬಗ್ಗೆ ತಹಸಿಲ್ದಾರ್ ರವರಿಂದ ಮಾಹಿತಿ ಪಡೆದುಕೊಂಡು ಜವಾಬ್ದಾರಿ ವಹಿಸಿಕೊಂಡ ಇಲಾಖೆಯವರು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿರುವ ಹಿನ್ನೆಲೆ ಪಟ್ಟಣದ ವಿವಿಧೆಡೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸೂಚನೆ ನೀಡಿದರು.

ಪಟ್ಟಣದ ಆರ್ ಎಂ ಸಿ ಆವರಣದಿಂದ ಕಲಾ ತಂಡಗಳ ಮೂಲಕ ಕನ್ನಡಾಂಬೆಯ ಭಾವ ಚಿತ್ರ ಮೆರವಣಿಗೆಯನ್ನು ಮಾಡಬೇಕು, ಕ್ಷೇತ್ರ ವ್ಯಾಪ್ತಿಯ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸ್ತಬ್ದ ಚಿತ್ರಗಳನ್ನು ಆಯೋಜನೆ ಮಾಡಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೋರಾಟಗಾರರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ವೈಕೆ ಗುರುಪ್ರಸಾದ್, ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಮಹೇಶ್, ಸೋಮಶೇಖರ್, ಟಿಎಚ್ಒ ಡಾ ಪ್ರಕಾಶ್, ಮುಖ್ಯಾಧಿಕಾರಿ ಅಶೋಕ್ ,ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ,ಸಿಡಿಪಿಓ ನಂಜಮಣಿ, ದೈಹಿಕ ಪರಿವೀಕ್ಷಕ ಮಹದೇವ್, ಎಎಸ್ಐ ಶಿವಕುಮಾರ್, ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತ ಅಧಿಕಾರಿ ಕಾವ್ಯ, ಕನ್ನಡಪರ ಹೋರಾಟಗಾರ ವಿನೋದ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಶ್ ರೈತ ಮುಖಂಡ ಮಾದಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

49 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

51 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

53 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

56 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago