ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್ ಬರೀ ಪ್ರತಿಭಟನೆಗೆ ಸೀಮಿತವಾಗಿದೆ.
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಎಂಇಎಸ್ ಭಿತ್ತಿಪತ್ರಗಳಿಗೆ ಟೊಮೆಟೊ ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಎಂಇಎಸ್ ಸಂಘಟನೆಯನ್ನು ಕೂಡಲೇ ನಿಷೇಧಿಸಬೇಕು. ರಾಜ್ಯದ ಹಿತ ಕಾಪಾಡಬೇಕು. ರಾಜ್ಯ ಇದ್ದರಷ್ಟೇ ನೀವು ಸಿಎಂ, ಡಿಸಿಎಂ ಆಗಿ ಮುಂದುವರಿಯಬಹುದು ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರು ಭಾಗಿಯಾಗಿದ್ದರು.
.